ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವರ್ಷವಿಡೀ ಭಕ್ತಸಾಗರ ಮಂಜುನಾಥ ಸ್ವಾಮಿ ದರ್ಶನ ಮಾಡಲು ಹೋಗುತ್ತಿರುತ್ತಾರೆ.. ಆದರೆ ಇದೇ ಮೊದಲ ಬಾರಿಗೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರು ಕೆಲ ದಿನ ಧರ್ಮಸ್ಥಳಕ್ಕೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ..

ಹೌದು.. ರಾಜ್ಯದಲ್ಲಿ ಅನೇಕ ಭಾಗಗಳಲ್ಲಿ ನೀರಿಗೆ ಆಹಾಕಾರ ಉಂಟಾಗಿದೆ.. ನೀರಿನ ತೊಂದರೆ ಶ್ರೀಕ್ಷೇತ್ರವನ್ನೂ ಬಿಟ್ಟಿಲ್ಲ.. ಅದಕ್ಕಾಗಿಯೇ ಧರ್ಮಾಧಿಕಾರಿಗಳು ಪತ್ರಿಕೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ..

ಬೇಸಿಗೆಯ ತೀವ್ರತೆಗೆ ದೇಶಾದ್ಯಂತ ನೀರಿನ ಅಭಾವವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನೀರಿಗಾಗಿ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟವಾದಂತೆ ರೇಶನ್ ಮುಖಾಂತರ ನೀರನ್ನು ಜಿಲ್ಲಾಡಳಿತವು ವಿತರಣೆ ಮಾಡುತ್ತಿದ್ದು, ವಾರಕ್ಕೆ 2 ಅಥವಾ 3 ದಿನ ಮಾತ್ರ ಜನರಿಗೆ ನೀರು ದೊರಕುತ್ತಿದೆ..

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡಾ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ರೀತಿಯಲ್ಲಿ ಕಡಿಮೆಯಾಗುತ್ತಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಕೋರುತ್ತೇನೆ ಎಂದು ಶ್ರೀ ವೀರೇಂದ್ರ ಹೆಗ್ಗಡೆ ಅವರು ಮನವಿ ಮಾಡಿದ್ದಾರೆ..

ದಯಮಾಡಿ ಎಲ್ಲಾ ಭಕ್ತರಿಗೂ ಮಾಹಿತಿ ತಲುಪಿಸಿ.. ಹಾಗೂ ಎಲ್ಲರೂ ಶ್ರೀ ವೀರೇಂದ್ರ ಹೆಗ್ಗಡೆ ಅವರ ಮಾತಿಗೆ ಬೆಲೆ ಕೊಟ್ಟು ಪ್ರವಾಸವನ್ನು ಮುಂದೂಡಿ ಸಹಕರಿಸಿ..

error: ಕಾಪಿ ಮಾಡೋದು ಬಿಟ್ಟು, ಶೇರ್ ಮಾಡಿ